ಸಂತೇಬಾಚಹಳ್ಳಿ: ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದ ಬಿ.ಆರ್.ಅಂಬೇಡ್ಕರ್ ಜಯಂತೋತ್ಸವದಲ್ಲಿ ಅಧ್ಯಕ್ಷೆ ಅನುರಾಧ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
‘ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಲ್ಲ. ಅವರು ನಮ್ಮ ದೇಶದ ಆಸ್ತಿ, ಅವರು ನಮಗಾಗಿ ಬರೆದಿರುವ ಸಂವಿಧಾನವನ್ನು ನಾವೆಲ್ಲರೂ ಪೂಜಿಸಿ ಅವರಿಗೆ ಗೌಡವ ನೀಡಿದರೆ ಜೀವನ ಸಾರ್ಥಕವಾಗುತ್ತದೆ’ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಬಿ. ಮೋಹನ್, ಮಂಜೇಗೌಡ, ಪಿಡಿಒ ನೂತನ್, ಕಾರ್ಯದರ್ಶಿ ಕೃಷ್ಣೆಗೌಡ, ಬಿಲ್ ಕಲೆಕ್ಟ್ರರ್ ಸುರೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.