ADVERTISEMENT

ಕುಡಿಯುವ ನೀರಿನ ಘಟಕ ಉದ್ಘಾಟನೆ 15ಕ್ಕೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 15:56 IST
Last Updated 13 ಜೂನ್ 2025, 15:56 IST

ಮಂಡ್ಯ: ಕಾಂಗ್ರೆಸ್‌ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ.ಪುಟ್ಟಸ್ವಾಮಿಗೌಡ ಅವರು ತಾಲ್ಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ನಿರ್ಮಿಸಿಕೊಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮವು ಜೂ.15 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ರಾಜೇಶ್‌ ಹೇಳಿದರು.

ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸುವರು. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯವೂ ಇರಲಿಲ್ಲ, ಹಾಗಾಗಿ ಗ್ರಾಮಸ್ಥರಿಗೆ ಅನುಕೂಲವಾಗಲೆಂದು ಗಮನಿಸಿದ ಬೆಂಗಳೂರಿನ ಉದ್ಯಮಿಯೂ ಆಗಿರುವ ಕೆ.ಸಿ. ಪುಟ್ಟಸ್ವಾಮಿಗೌಡ ಅವರು ಸುಮಾರು ₹15 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಕೊಟ್ಟಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಆರ್. ಮಹದೇವು, ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು. ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ, ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್ ಭಾಗವಹಿಸುವರು ಎಂದರು.

ADVERTISEMENT

ಸಂಘದ ಖಜಾಂಚಿ ಎಸ್‌.ಎನ್‌.ರಾಜು, ಮುಖಂಡರಾದ ಕೆಂಚಪ್ಪ, ಯತೀಶ್‌, ಮಹದೇವು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.