ADVERTISEMENT

ಮಂಡ್ಯ | ಗಾಯಗೊಂಡಿದ್ದ ಗುಡ್ಡಪ್ಪ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2025, 14:44 IST
Last Updated 25 ಮೇ 2025, 14:44 IST
ಗುಡ್ಡಪ್ಪ ಮಹದೇವು
ಗುಡ್ಡಪ್ಪ ಮಹದೇವು   

ಮಂಡ್ಯ: ತಾಲ್ಲೂಕಿನ ಕಾರಸವಾಡಿದಲ್ಲಿ ಅಗ್ನಿಕೊಂಡಕ್ಕೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬೋರೆದೇವರ ಗುಡ್ಡಪ್ಪ ಮಹದೇವು (55) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ.

ಏ. 21ರಂದು ಗ್ರಾಮದಲ್ಲಿ ಹಬ್ಬದ ಅಂಗವಾಗಿ ಬೋರೇದೇವರ ದೇವಸ್ಥಾನದಲ್ಲಿ ಕೊಂಡಬಂಡಿ ಉತ್ಸವ ಏರ್ಪಡಿಸಲಾಗಿತ್ತು. ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.