ADVERTISEMENT

ಒಳಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕಿ: ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:05 IST
Last Updated 24 ಫೆಬ್ರುವರಿ 2026, 7:05 IST
ಒಳಮೀಸಲಾತಿ ವಿಧೇಯಕ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಮಂಡ್ಯ ನಗರದ ಜೆ.ಸಿ. ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
ಒಳಮೀಸಲಾತಿ ವಿಧೇಯಕ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಮಂಡ್ಯ ನಗರದ ಜೆ.ಸಿ. ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು   

ಮಂಡ್ಯ: ‘ಸಂವಿಧಾನ ಆಶಯದಂತೆ ಪರಿಶಿಷ್ಟರ ಮೀಸಲಾತಿ ಹಂಚಿಕೊಳ್ಳಲು ಒಳಮೀಸಲಾತಿ ವಿಧೇಯಕ ಮಸೂದೆಗೆ ರಾಜ್ಯಪಾಲರು ಕೂಡಲೇ ಅಂಕಿತ ಹಾಕಬೇಕು’ ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ, ಕರ್ನಾಟಕ ಮಾದರ ಮಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ. ವೃತ್ತದ ಬಳಿ ಜಮಾವಣೆಗೊಂಡು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯ ಸರ್ಕಾರ ಈಗಾಗಲೇ ಆದೇಶ ಮಾಡಿರುವಂತೆ ಜಿಲ್ಲಾಡಳಿತ ಹಾಗೂ ತಹಶೀಲ್ದಾರ್‌ಗಳು ಪರಿಶಿಷ್ಟ ಜಾತಿಯ ಮಾದಿಗ ಜನಾಂಗಕ್ಕೆ ಪ್ರವರ್ಗ–ಎ ಮಾದಿಗ ಎಂದೇ ಜಾತಿ ದೃಢೀಕರಣ ಪತ್ರ ನೀಡಬೇಕು. ನೇರ ನೇಮಕಾತಿ ಜೊತೆಗೆ ಹಾಗೂ ಬ್ಯಾಕ್‌ಲಾಗ್‌ ಕೆಐಎಡಿಬಿ ಹಾಗೂ ಬಿಡಿಎ ಮತ್ತು ಸರ್ಕಾರಿ ಗುತ್ತಿಗೆ ಸೇರಿದಂತೆ ಎಲ್ಲ ನೇಮಕಾತಿಯಲ್ಲೂ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಎಸ್‌ಸಿಪಿ, ಟಿಎಸ್‌ಪಿ ಅನುದಾದಲ್ಲೂ 6:65 ಅನುಪಾತದಲ್ಲಿ ಹಂಚಿಕೆಯಾಗಬೇಕು. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆಯಲ್ಲೂ ರಾಜಕೀಯ ಒಳಮೀಸಲಾತಿ ಕಲ್ಪಿಸಬೇಕು. ಆದಿಜಾಂಬವ ಅಭಿವೃದ್ಧಿ ನಿಗಮ ಡಾ.ಬಾಬು ಜಗಜೀವನ್‌ ರಾಮ್‌ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ ₹2 ಸಾವಿರ ಕೋಟಿ ಹಣ ನೀಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಎನ್‌.ಆರ್‌.ಚಂದ್ರಶೇಖರ್‌, ಸಿ.ಕೆ.ಪಾಪಯ್ಯ, ಪುಟ್ಟರಾಜು, ಶಿವಕುಮಾರ್, ರವಿ, ಸಿದ್ದರಾ‌ಜು, ಕೃಷ್ಣ, ಸಿ.ಕೆ.ಸ್ವಾಮಿ, ಕೆಂಪಯ್ಯ, ನಾರಾಯಣಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.