ADVERTISEMENT

‘ತಂತ್ರಜ್ಞಾನ ಶಿಕ್ಷಣ ಕಲಿಕೆ ಮಹತ್ವದ್ದು’

ಹೆಚ್ಚು ಅಂಕ ಪಡೆದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 3:28 IST
Last Updated 28 ಸೆಪ್ಟೆಂಬರ್ 2025, 3:28 IST
ನಾಗಮಂಗಲ ತಾಲ್ಲೂಕಿನ ಬಿಜಿಎಸ್ ಸಭಾಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ಆದಿಚುಂಚನಗಿರಿ ಟ್ರಸ್ಟ್‌ ವಿದ್ಯಾರ್ಥಿಗಳನ್ನ ಸನ್ಮಾನಿಸಲಾಯಿತು
ನಾಗಮಂಗಲ ತಾಲ್ಲೂಕಿನ ಬಿಜಿಎಸ್ ಸಭಾಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ಆದಿಚುಂಚನಗಿರಿ ಟ್ರಸ್ಟ್‌ ವಿದ್ಯಾರ್ಥಿಗಳನ್ನ ಸನ್ಮಾನಿಸಲಾಯಿತು   

ನಾಗಮಂಗಲ: ಹಿಂದೆ ಓದು ಬರಹವನ್ನೇ ಶಿಕ್ಷಣ ಎನ್ನಲಾಗುತ್ತಿತ್ತು, ಆದರೆ ಅದು ಬದಲಾಗಿ ಅನಕ್ಷರತೆಯಿಂದ ಸಾಕ್ಷೆತೆಯೆಡೆಗೆ ಸಾಗಿದ ಸ್ಪರ್ಧಾತ್ಮಕ ಯುಗದಲ್ಲಿ ಕೌಶಾಲ್ಯಧಾರಿತ ವಿಜ್ಞಾನ ಹಾಗೂ ತಂತ್ರಜ್ಞಾನ ಶಿಕ್ಷಣ ಕಲಿಯುವುದು ಮುಖ್ಯವಾಗಿದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕ್ಷೇತ್ರದ ಬಿಜಿಎಸ್ ಸಭಾಭವನದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಶುಕ್ರವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ, ಐಸಿಎಸ್ಇ, ಸಿಬಿಎಸ್ಇ, ದ್ವಿತೀಯ ಪಿಯುಸಿ, ನೀಟ್, ಜೆಇಇ ಮತ್ತು ಕೆಸಿಇಟಿಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, ‘ಆದಿಚುಂಚನಗಿರಿ ಶ್ರೀಮಠದ ವತಿಯಿಂದ 450ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು, ಎಲ್‌ಕೆಜಿ ಯಿಂದ ಪಿಹೆಚ್‌ಡಿ ವರೆಗೂ ಒಟ್ಟು 1,72,000 ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ದಿನಚರಿ, ವ್ಯಾಸಂಗ ಪರಿಶ್ರಮ ಇದ್ದರೆ ಸಾಧನೆ ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಶಾಸಕ ಅಶ್ವಥ್ ನಾರಾಯಣ್ ಮಾತನಾಡಿ, ‘ವಿವಿಧ ಪರೀಕ್ಷೆಗಳಲ್ಲಿನ ಹೆಚ್ಚು ಅಂಕ ಪಡೆದ ಸಾಧಕ ಪ್ರತಿಭೆಗಳಿಗೆ ಪುರಸ್ಕರಿಸಿ ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿರುವುದು ಎಲ್ಲ ಪೋಷಕರಿಗೆ ಹೆಮ್ಮೆಯ ವಿಷಯ’ ಎಂದರು.

ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಶಾಲಾ ಕಾಲೇಜುಗಳಲ್ಲಿ ಅಧ್ಯಯನ ಮಾಡಿ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಜೆಇಇ, ನೀಟ್, ಕೆಸಿಇಟಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜೊತೆಗೆ ಶಾಲಾ ಕಾಲೇಜು ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿ ಎ.ಟಿ.ಶಿವರಾಮು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.