ADVERTISEMENT

ಮಂಡ್ಯ: ಮೋದಿಗೆ ಮನವಿ ಕೊಡಲು ಬಂದಿದ್ದ ಜನಶಕ್ತಿ ಸಂಘಟನೆ ಸದಸ್ಯರು ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 6:18 IST
Last Updated 12 ಮಾರ್ಚ್ 2023, 6:18 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಬಂದಿದ್ದ ಜನಶಕ್ತಿ ಸಂಘಟನೆ ಸದಸ್ಯರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದರು.

ಮೋದಿ ಅವರು ರೋಡ್ ಶೋ ತೆರಳುವ ಮಾರ್ಗ, ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜನಶಕ್ತಿ ಸದಸ್ಯರು ಸೇರಿದ್ದರು.

ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು, ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ರದ್ದುಪಡಿಸಬೇಕು, ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಸದಸ್ಯರು ಘೋಷಣೆ ಕೂಗಿದರು.

ADVERTISEMENT

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಳ್ಳಿ, ಮನವಿ ಪತ್ರ ಹರಿದು ಹಾಕಿದರು. ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಪೊಲೀಸರು ಬಲವಂತವಾಗಿ ಪ್ರತಿಭಟನಾಕಾರರನ್ನು ವಾಹನದೊಳಗೆ ತಳ್ಳಿಕೊಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.