ADVERTISEMENT

ಮಂಡ್ಯ | HDD, HDK, ನಿಖಿಲ್‌, ಮೂವರಲ್ಲೊಬ್ಬರು ಸ್ಪರ್ಧಿಸಲಿ: JDS ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 23 ಜನವರಿ 2024, 14:10 IST
Last Updated 23 ಜನವರಿ 2024, 14:10 IST
ಜೆಡಿಎಸ್‌ ಚಿಹ್ನೆ
ಜೆಡಿಎಸ್‌ ಚಿಹ್ನೆ   

ಮಂಡ್ಯ: ‘ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರಾದ ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಹಾಗೂ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ – ಈ ಮೂವರಲ್ಲಿ ಒಬ್ಬರಾದರೂ ಸ್ಪರ್ಧಿಸಬೇಕು’ ಎಂದು ಸ್ಥಳೀಯ ಜೆಡಿಎಸ್‌ ಮುಖಂಡರು ಒತ್ತಾಯಿಸಿದ್ದಾರೆ.

ಮಂಗಳವಾರ ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್‌ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರಕಟಣೆಗೆ ಶಾಸಕ ಎಚ್‌.ಟಿ.ಮಂಜು, ಮುಖಂಡರಾದ ಡಿ.ಸಿ.ತಮ್ಮಣ್ಣ, ಸಿ.ಎಸ್‌.ಪುಟ್ಟರಾಜು, ಸುರೇಶ್‌ಗೌಡ, ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಬಿ.ಆರ್‌.ರಾಮಚಂದ್ರು ಸಹಿ ಹಾಕಿದ್ದಾರೆ.

‘ಮೂವರಲ್ಲಿ ಯಾರೇ ಅಭ್ಯರ್ಥಿಯಾದರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಗೆಲ್ಲಿಸಿಕೊಂಡು ಬರುವುದಾಗಿ ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮುಖಂಡರು ಒಪ್ಪಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.