ADVERTISEMENT

ಮಳವಳ್ಳಿ| ಶೋಷಣೆಗೆ ಒಳಗಾದವರಿಗೆ ನ್ಯಾಯ ಒದಗಿಸುವ ಕೆಲಸ: ಡಾ.ಎಲ್.ಮೂರ್ತಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 2:49 IST
Last Updated 9 ಡಿಸೆಂಬರ್ 2025, 2:49 IST
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರನ್ನು ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಆಚರಣಾ ಸಮಿತಿ ಸದಸ್ಯರು ಅಭಿನಂದಿಸಿದರು 
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರನ್ನು ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಆಚರಣಾ ಸಮಿತಿ ಸದಸ್ಯರು ಅಭಿನಂದಿಸಿದರು    

ಮಳವಳ್ಳಿ: ಕೆಲ ತಿಂಗಳಿಂದ ಎಲ್ಲೆಡೆ ಪ್ರವಾಸ ಕೈಗೊಂಡು ಶೋಷಣೆಗೆ ಒಳಗಾದವರಿಂದ ದೂರು ಸ್ವೀಕರಿಸಿ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ಸಾರ್ವಜನಿಕರ ದೂರುಗಳನ್ನು ಅದಾಲತ್ ಮೂಲಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ವಿಲೇವಾರಿಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ಕಂದಾಯ, ಎಸ್ಸಿಪಿ ಟಿಎಸ್ಪಿ ಹಣ ಬಳಕೆ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಾಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧ ದೂರುಗಳು ಬಂದಿವೆ. ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಗೊಂದಲ ಇಲ್ಲದ ಅನೇಕ ಪ್ರಕರಣಗಳನ್ನು ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

ADVERTISEMENT

‘ಮಂಡ್ಯ ಜಿಲ್ಲೆಯಲ್ಲಿ 150ಕ್ಕೂ ಪ್ರಕರಣಗಳು ಆಯೋಗದಲ್ಲಿ ದಾಖಲಾಗಿವೆ. ಪ್ರಸ್ತುತದಲ್ಲಿ ಮದ್ದೂರಿನಲ್ಲಿ 42, ಮಳವಳ್ಳಿಯ 38 ದೂರುಗಳು ಸಲ್ಲಿಕೆಯಾಗಿವೆ. 2014-15ರಿಂದ 2024-25ರವರೆಗೆ ಹಲವಾರು ಪ್ರಕರಣಗಳು ಬಾಕಿ ಉಳಿದಿವೆ. ಎಲ್ಲ ಪ್ರಕರಣಗಳ ಶೀಘ್ರ ವಿವೇವಾರಿ ಮಾಡಲು ಪ್ರಯತ್ನ ನಡೆಸಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆ ನೀಡಲಾಗಿದ್ದು, ಅಧಿಕಾರಿಗಳಿಂದ ಭರವಸೆ ಸಿಕ್ಕಿದೆ’ ಎಂದರು.

ಅದಾಲತ್ ಅಡಿಯಲ್ಲಿ ಅರ್ಜಿದಾರರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸುವ ಅವಕಾಶ ಕಲ್ಪಿಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆರಿಹರಿಸಲಾಗುವುದು ಎಂದು ಹೇಳಿದರು.

ವಿವಿಧ ಸಂಘಟನೆಗಳ ಮುಖಂಡರು ಡಾ.ಎಲ್.ಮೂರ್ತಿ ಅವರನ್ನು ಅಭಿನಂದಿಸಿದರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ತಾ.ಪಂ.ಇಒ ಎಚ್.ಜಿ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಶಿರಸ್ತೇದಾರ್ ಗುರುಪ್ರಸಾದ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.