ADVERTISEMENT

ಬಾಲಾಪರಾಧ: ವಯಸ್ಕರೆಂದು ಪರಿಗಣಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 19:50 IST
Last Updated 18 ಡಿಸೆಂಬರ್ 2020, 19:50 IST

ಮಂಡ್ಯ: ಕಬ್ಬಿನ ಗದ್ದೆಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿದ ಪ್ರಕರಣ ಸೇರಿ ಇತರ 4 ಹೀನ ಕೃತ್ಯಗಳಲ್ಲಿ ಆರೋಪಿಗಳಾಗಿರುವ ಬಾಲಕರನ್ನು ವಯಸ್ಕರು ಎಂದು ಪರಿಗಣಿಸಿ, ವಿಚಾರಣೆ ನಡೆಸುವಂತೆ ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ಎನ್‌.ಡಿ.ಮಾಲಾ ಗುರುವಾರ ಆದೇಶಿಸಿದ್ದಾರೆ.

ಮದ್ದೂರು ತಾಲ್ಲೂಕಿನ ಕೊಪ್ಪ ಬಳಿ ನಡೆದ ಅತ್ಯಾಚಾರ ಯತ್ನ, ಕೊಲೆ ಪ್ರಕರಣ, ಭಾರತೀನಗರದ ಕೆ.ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ, ಮಂಡ್ಯ ನಗರದಲ್ಲಿ ನಡೆದ ಕೊಲೆ ಪ್ರಕರಣ, ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಾಲಕರು ಆರೋಪಿಗಳಾಗಿದ್ದಾರೆ. ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ.

ಆರೋಪಿಗಳು ಮಾಡಿರುವ ಕೃತ್ಯ ಹೀನ ಸ್ವರೂಪದ್ದಾಗಿದ್ದು, ವಯಸ್ಕರು ಎಂದೇ ಪರಿಗಣಿಸಿ ವಿಚಾರಣೆ ನಡೆಸಬೇಕು. ನಂತರ ಪ್ರಕರಣವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂದು ಆದೇಶ ಮಾಡಿದ್ದಾರೆ.

ADVERTISEMENT

ಸರ್ಕಾರದ ಪರ ಹಿರಿಯ ಸಹಾಯಕ ಅಭಿಯೋಜಕಿ ಜಿ.ವೆಂಕಟಲಕ್ಷ್ಮಮ್ಮ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.