ADVERTISEMENT

ಕೆ.ಆರ್.ಪೇಟೆ |  ಮತಗಟ್ಟೆಗಳಿಗೆ ತಹಶೀಲ್ದಾರ್ ಭೇಟಿ- ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 13:39 IST
Last Updated 29 ಮಾರ್ಚ್ 2024, 13:39 IST
:  ಕೆ.ಆರ್.ಪೇಟೆ ತಾಲ್ಲೂಕಿನ  ಮತಗಟ್ಟೆ ಕೇಂದ್ರಗಳಿಗೆ ತಹಶೀಲ್ದಾರ್ ಡಾ:ಲೋಕೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
:  ಕೆ.ಆರ್.ಪೇಟೆ ತಾಲ್ಲೂಕಿನ  ಮತಗಟ್ಟೆ ಕೇಂದ್ರಗಳಿಗೆ ತಹಶೀಲ್ದಾರ್ ಡಾ:ಲೋಕೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.   

ಕೆ.ಆರ್.ಪೇಟೆ: ತಾಲ್ಲೂಕಿನ ವಿವಿಧ ಮತಗಟ್ಟೆಗಳಿಗೆ ಸಹ ಚುನಾವಣಾಧಿಕಾರಿ ತಹಶೀಲ್ದಾರ್ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮತಗಟ್ಟೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು ಸುಗಮ ಮತದಾನಕ್ಕೆ ಅಗತ್ಯ ಕ್ರಮ ವಹಿಸಲು ಸೂಚಿಸಿದರು. ಪ್ರತಿ ಮತಗಟ್ಟೆಗಳು ಮಾದರಿಯಾಗಿರಬೇಕು. ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗೆ ಅನುಕೂಲವಾಗುವ ರೀತಿ, ಮತಚಲಾಯಿಸಲು ಬರುವವರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಬೇಕು. ವಿದ್ಯುತ್ ಸಂಪರ್ಕ, ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು ಎಂದು ಸೂಚಿಸಿದರು.

ಮತದಾನ ಕೇಂದ್ರದ ಕಟ್ಟಡದ ಮುಂದೆ ಮತಗಟ್ಟೆ ಸಂಖ್ಯೆ ಹಾಗೂ ಬಿಎಲ್ಒಗಳ ಹೆಸರನ್ನು ಕಡ್ಡಾಯವಾಗಿ ಬರೆಸಿರಬೇಕು.  ಅಕ್ರಮಗಳು ನಡೆಯುತ್ತಿರುವುದು ಕಂಡು ಬಂದರೆ ತಾಲ್ಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದರು. ಚುನಾವಣಾ ಶಾಖೆಯ ಸಿಬ್ಬಂದಿ ಹಾಗೂ ಮತಗಟ್ಟೆ  ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.