ಕೆ.ಆರ್.ಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ನಾಲ್ವರು ವಿದ್ಯಾರ್ಥಿಗಳು ಕೆ-ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇತಿಹಾಸ ಮತ್ತು ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಕೊನೆಯ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರುವ ಬಿ.ಎಸ್. ಅನಿಲ್ ಕುಮಾರ್, ಎಂ. ಉಷಾ, ಪಿ.ವಿ. ಗಣೇಶ ಮತ್ತು ಮೊಹಮ್ಮದ್ ಅಕೀಫ್ ಪಾಸಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಡಿ.ಆರ್. ಸುಶ್ಮಿತಾ ಕನ್ನಡ ವಿಭಾಗದಲ್ಲಿ ಉತ್ತಮ ಅಂಕ ಗಳಿಸಿ ಮೈಸೂರು ವಿಶ್ವವಿದ್ಯಾಲಯದ 105ನೇ ಘಟಿಕೋತ್ಸವ ಸಮಾರಂಭದಲ್ಲಿ ಚಿನ್ನದ ಪದಕ ಪಡೆಯಲು ಅರ್ಹತೆ ಪಡೆದಿದ್ದಾರೆ.
‘ನಾಲ್ವರು ಬಡ ಮಧ್ಯಮ ವರ್ಗದಿಂದ ಬಂದ ವಿದ್ಯಾರ್ಥಿಗಳಾಗಿದ್ದು, ಈಗಿರುವ ನಿಯಮಾವಳಿ ಅನ್ವಯ ಇವರೆಲ್ಲರೂ ಪ್ರಾಧ್ಯಾಪಕರಾಗಲು ಅರ್ಹತೆ ಪಡೆದುಕೊಂಡಿದ್ದಾರೆ. ಸಾಧನೆಗೆ ಕಾರಣರಾದ ಕಾಲೇಜಿನ ಎಲ್ಲಾ ಪ್ರಾಧ್ಯಾಪಕ ವರ್ಗಕ್ಕೂ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಪ್ರಾಂಶುಪಾಲ ಜಗದೀಶ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.