ಬೆಳಕವಾಡಿ: ಬಿಜಿಪುರ ಹೋಬಳಿಯ ಕಗ್ಗಲೀಪುರ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ 7 ಕಾಡಾನೆಗಳ ಹಿಂಡು ಕಾಣಿಸಿಕೊಂಡು ಅಕ್ಕ-ಪಕ್ಕದ ಗ್ರಾಮ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ತಾಲ್ಲೂಕಿನ ಕಗ್ಗಲೀಪುರ ಗ್ರಾಮದ ಬಳಿಯ ರವಿ ಎಂಬುವವರ ಜಮೀನಿನಲ್ಲಿ ಕಾಣಿಸಿಕೊಂಡು ಕಾಡಾನೆಗಳು ಅರಣ್ಯ ಪ್ರದೇಶದಿಂದ ಬಂದಿವೆ. ಪಕ್ಕದ ಹಳ್ಳದಲ್ಲಿ ಬೆಳೆದು ನಿಂತಿದ್ದ ಬಿದಿರನ್ನು ಮೇಯುತ್ತಿದ್ದ ಒಂದು ಮರಿ ಸೇರಿ ಒಟ್ಟು ಏಳು ಆನೆಗಳನ್ನು ಕಂಡ ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ ಆನೆಗಳು ಜನರತ್ತ ಧಾವಿಸುತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿಗಳು 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿ ಆನೆಗಳು ಗ್ರಾಮಗಳತ್ತ ಬರದಂತೆಮುಂಜಾಗ್ರತ ಕ್ರಮ ತೆಗೆದುಕೊಂಡರು. ಸಂಜೆ ನಂತರ ಕಾಡಾನೆಗಳನ್ನು ಶಿಂಷಾ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಆಸೀಫ್ ಅಹ್ಮದ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.