
ಮಂಡ್ಯ: ಇಲ್ಲಿನ ಕರ್ನಾಟಕ ಸಂಘದ ‘ಡಾ.ರಾಗೌ ಸಾಹಿತ್ಯ ಪ್ರಶಸ್ತಿ’ಗೆ ಮೈಸೂರಿನ ವಿಶ್ರಾಂತ ಕುಲಪತಿ ಪದ್ಮಾಶೇಖರ್ ಮತ್ತು ಕೆ.ಸಿಂಗಾರಿಗೌಡ ಪುಸ್ತಕ ಪ್ರಶಸ್ತಿಗೆ ವಿಜಯನಗರ ಜಿಲ್ಲೆಯ ಪ್ರೊ.ಕೆ.ರವೀಂದ್ರನಾಥ ಆಯ್ಕೆಯಾಗಿದ್ದಾರೆ.
‘ಪ್ರಶಸ್ತಿಯು ₹15 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಕರ್ನಾಟಕ ಸಂಘ, ಎಂ.ಎಲ್. ಶ್ರೀಕಂಠೇಗೌಡ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಜೂನ್ 8ರಂದು ಸಂಜೆ 5 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಕೆ.ವಿ.ಎಸ್ ಭವನದಲ್ಲಿ ನಡೆಯಲಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.
‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಅಧ್ಯಕ್ಷತೆ ವಹಿಸುವರು. ಪ್ರೊ. ರಾಗೌ, ಸಿಂಗಾರಿಗೌಡರ ಪುತ್ರ ನಾಗಮಂಗಲ ಕೆ.ಎಸ್. ಆನಂದ್ ಕರಡಹಳ್ಳಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.