ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ: ಡಿ.20, 21 ಶಾಲೆ–ಕಾಲೇಜಿಗೆ ರಜೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2024, 15:45 IST
Last Updated 18 ಡಿಸೆಂಬರ್ 2024, 15:45 IST
<div class="paragraphs"><p>ಕನ್ನಡ ಸಾಹಿತ್ಯ ಸಮ್ಮೇಳನ:</p></div>

ಕನ್ನಡ ಸಾಹಿತ್ಯ ಸಮ್ಮೇಳನ:

   

ಮಂಡ್ಯ: ಜಿಲ್ಲೆಯ ಸಮಸ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ಡಿ.20 ಮತ್ತು ಡಿ.21ರಂದು (ಶುಕ್ರವಾರ ಮತ್ತು ಶನಿವಾರ) ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕುಮಾರ ಆದೇಶ ಹೊರಡಿಸಿದ್ದಾರೆ. 

ನಾಡು–ನುಡಿ ಬಗ್ಗೆ ವಿವಿಧ ಗೋಷ್ಠಿಗಳು ಇರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲಿ ಎಂಬ ಉದ್ದೇಶದಿಂದ ಮತ್ತು ಗಣ್ಯ ವ್ಯಕ್ತಿಗಳು, ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ವಾಸ್ತವ್ಯಕ್ಕೆ ಕೊಠಡಿ ವ್ಯವಸ್ಥೆ ಮಾಡಿರುವ ಕಾರಣ ರಜೆ ಘೋಷಿಸಲಾಗಿದೆ. 

ADVERTISEMENT

ಸಾಹಿತ್ಯ ಸಮ್ಮೇಳನದ ಸಮಾರೋಪ ದಿನವಾದ ಡಿ.22ರಂದು ಭಾನುವಾರ ಇರುವ ಕಾರಣ, ಎಲ್ಲ ಸರ್ಕಾರಿ ನೌಕರರು ಭಾಗವಹಿಸಲು ಅನುಕೂಲಕರವಾಗಿದೆ ಎನ್ನಲಾಗಿದೆ.

ಸದರಿ ರಜೆ ಅವಧಿಯನ್ನು ಸರ್ಕಾರಿ ರಜೆ ದಿನದಂದು ಸರಿದೂಗಿಸಿ, ಪಾಠ–ಪ್ರವಚನ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.