ADVERTISEMENT

ಮದ್ದೂರು: ಕನ್ನಡ ಶಾಲೆಗಳನ್ನು ಮುಚ್ಚದಿರಲು ಆಗ್ರಹ

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಮದ್ದೂರಿನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 5:15 IST
Last Updated 10 ಜನವರಿ 2026, 5:15 IST
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರಿನ ತಾಲ್ಲೂಕು ಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆಯನ್ನು ನಡೆಸಲಾಯಿತು 
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರಿನ ತಾಲ್ಲೂಕು ಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆಯನ್ನು ನಡೆಸಲಾಯಿತು    

ಮದ್ದೂರು: ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಕನ್ನಡ ಶಾಲೆಗಳನ್ನು ಮುಚ್ಚಬಾರದು ಎಂಬ ಪ್ರಮುಖ ಬೇಡಿಕೆಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆಯನ್ನು ನಡೆಸಲಾಯಿತು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ‘ರಾಜ್ಯದಲ್ಲಿ ಸರ್ಕಾರದ ವಿವಿಧ ಪ್ರಮುಖ ಇಲಾಖೆಗಳಲ್ಲಿ ₹3.80 ಲಕ್ಷ ಹುದ್ದೆಗಳು ಖಾಲಿಯಿದ್ದು, ಕೃಷಿ ಇಲಾಖೆ 6,876, ಪಶುಸಂಗೋಪನೆ 11,020, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 8,526, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 6,190, ಹಣಕಾಸು ಇಲಾಖೆ 7,668, ಮೀನುಗಾರಿಕೆ 838 ಆಹಾರ ಮತ್ತು ನಾಗರಿಕ ಪೂರೈಕೆ 1,442, ಅರಣ್ಯ 6478 ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ 37,572, ಉನ್ನತ ಶಿಕ್ಷಣ 13599, ಕಂದಾಯ 10867 ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ 10,504, ಪರಿಶಿಷ್ಟ ಜಾತಿ ಕಲ್ಯಾಣ 9,646 ಶಿಕ್ಷಣ 79,694 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 3,391 ಹುದ್ದೆಗಳು ಖಾಲಿ ಇದ್ದು ಶೀಘ್ರವಾಗಿ ಭರ್ತಿ ಮಾಡಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಒತ್ತಾಯಿಸಿದ ಅವರು ಗ್ರಾಮಾಂತರ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ ರೈತ ಬೆಳೆದ ಬೆಳೆಗಳನ್ನ ರಕ್ಷಿಸಬೇಕು ಹಾಗೂ ಹಾನಿಯಾದ ಬೆಳಗಳಿಗೆ ರಾಜ್ಯ ಸರ್ಕಾರವು ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ADVERTISEMENT

ಶಿರಸ್ತೇದಾರ್ ಚಲುವರಾಜು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ,ಎಂ.ಸಿ. ಲಿಂಗರಾಜು, ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಸಂಘಟನಾ ಕಾರ್ಯದರ್ಶಿ ಉಮೇಶ್, ಗೌರವಾಧ್ಯಕ್ಷರಾದ ವಿ.ಎಚ್.ಶಿವಲಿಂಗಯ್ಯ, ರಾಜೇಶ್, ಆಲೂರು ಚನ್ನಪ್ಪ, ಯುವ ಘಟಕದ ಅಧ್ಯಕ್ಷ ವಿಶ್ವಾಸ್, ಪಟೇಲ್ ಹರೀಶ್, ಎಂ.ವೀರಪ್ಪ ಹಾಗೂ ರೈತ ಮುಖಂಡರಾದ ಸೊ.ಸಿ.ಪ್ರಕಾಶ್, ಕುದುರಗುಂಡಿ ನಾಗರಾಜು, ಕೆ.ಜಿ. ಉಮೇಶ್, ರಾಮಲಿಂಗಯ್ಯ, ವೆಂಕಟೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.