ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಬಿ. ಮಂಜೇಶ್ ಸಂಬಂಧಿಕರ ಮನೆ
ಮಂಡ್ಯ: ಮಳವಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ವಿವಿಧೆಡೆ ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಬಿ. ಮಂಜೇಶ್ ಸಂಬಂಧಿಕರ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
ಮಳವಳ್ಳಿ ತಾಲ್ಲೂಕು ಹಲಗೂರು ಸಮೀಪದ ಅಗಸನಪುರ ಗ್ರಾಮದ ಮಂಜೇಶ್ ಚಿಕ್ಕಪ್ಪನ ಮನೆ, ನಂಜಾಪುರದ ತೋಟದ ಮನೆಯ ಮೇಲೆ ದಾಳಿ ನಡೆಸಲಾಗಿದೆ.
ಮಂಜೇಶ್ ಸಂಬಂಧಿ ಸುರೇಂದ್ರ ಎಂಬುವವರಿಗೆ ಸೇರಿದ ಎರಡು ಮನೆಗಳ ಮೇಲೂ ದಾಳಿ ನಡೆದಿದೆ.
ಮದ್ದೂರು ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿಯಲ್ಲಿರುವ ಮಂಜೇಶ್ ಅಜ್ಜಿಯ ಮನೆಗೂ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸುಜಿತ್ ನೇತೃತ್ವದಲ್ಲಿ ಪೊಲೀಸರ ತಂಡ ಶೋಧ ಕಾರ್ಯ ಮುಂದುವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.