ಸಿ.ಎಸ್.ಪುಟ್ಟರಾಜು
ಮಂಡ್ಯ: ‘ನಾನು ಜೆಡಿಎಸ್ ಪಕ್ಷದಲ್ಲೇ ಇರುತ್ತೇನೆ, ಊಹಾಪೋಹಗಳಿಗೆ ಕಿವಿಗೊಡದಂತೆ ನಮ್ಮ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಸದ್ಯಕ್ಕೆ ಜಿಲ್ಲೆಯಾದ್ಯಂತ ಕಾವೇರಿ ನೀರಿಗಾಗಿ ರೈತಪರವಾಗಿ ಹೋರಾಡುತ್ತೇವೆ’ ಎಂದು ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಶುಕ್ರವಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ, ಅವರನ್ನು ಮನೆಗೆ ಕರೆದುಕೊಂಡು ಬರಲು ಹೋಗುತ್ತಿದ್ದೇವೆ. ನಾನು ಜೆಡಿಎಸ್‌ನಲ್ಲಿ ಸಕ್ರಿಯವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಕೃಪೇಂದ್ರರೆಡ್ಡಿ ಹಾಗೂ ನಾನು ಕೊಡಗಿನಲ್ಲಿ ಜೊತೆಯಲ್ಲಿದ್ದು ಪೂಜೆ ಸಲ್ಲಿಸಲು ತೆರಳಿದ್ದೆವು. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.