ADVERTISEMENT

ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿ: ನಾಳೆ ಸಿಎಂ ಬಾಗಿನ ಅರ್ಪಣೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 15:33 IST
Last Updated 19 ಜುಲೈ 2022, 15:33 IST
ಕೆಆರ್‌ಎಸ್‌ ಜಲಾಶಯ
ಕೆಆರ್‌ಎಸ್‌ ಜಲಾಶಯ   

ಮಂಡ್ಯ: ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಧ್ಯಾಹ್ನ 12.10ಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಮಂಗಳವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟ 124.74 ಅಡಿಗೆ ತಲುಪಿದೆ. ರಾತ್ರಿಯ ವೇಳೆಗೆ ಗರಿಷ್ಠ ಮಟ್ಟ 124.80 ಅಡಿಗೆ ತಲುಪಲಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಜಲಾಶಯಕ್ಕೆ 59,734 ಕ್ಯುಸೆಕ್‌ ಒಳಹರಿವು, 57,411 ಕ್ಯುಸೆಕ್‌ ಹೊರಹರಿವು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT