
ಪ್ರಜಾವಾಣಿ ವಾರ್ತೆ
ಮಂಡ್ಯ ಕೃಷಿ ವಿವಿಯ ನೂತನ ಕುಲಪತಿಯಾಗಿ ಕೆ.ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ
ಮಂಡ್ಯ: ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಕೆ.ಸಿ. ನಾರಾಯಣಸ್ವಾಮಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ನಾರಾಯಣಸ್ವಾಮಿ ಅವರು ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ನಾರಾಯಣಸ್ವಾಮಿ ಮಾತನಾಡಿ, ಈ ಕೃಷಿ ವಿವಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಹಾಗೂ ರೈತಕೇಂದ್ರಿತ ಸಂಶೋಧನೆ, ಗುಣಮಟ್ಟದ ಶಿಕ್ಷಣ ಮತ್ತು ಪರಿಣಾಮಕಾರಿ ವಿಸ್ತರಣಾ ಚಟುವಟಿಕೆಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.