ADVERTISEMENT

‘ಪರಿಸರ ಸ್ವಚ್ಛವಾಗಿಡಿ’

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 15:54 IST
Last Updated 28 ಜೂನ್ 2025, 15:54 IST
ಸಂತೇಬಾಚಹಳ್ಳಿ ಹೋಬಳಿಯ ಮಾರೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಚಾರಣೆಯನ್ನು ಡಾ. ಹರ್ಷವರ್ದಿನಿ ಉದ್ಘಾಟಿಸಿದರು
ಸಂತೇಬಾಚಹಳ್ಳಿ ಹೋಬಳಿಯ ಮಾರೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಚಾರಣೆಯನ್ನು ಡಾ. ಹರ್ಷವರ್ದಿನಿ ಉದ್ಘಾಟಿಸಿದರು   

ಸಂತೇಬಾಚಹಳ್ಳಿ :ಮಾರೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಚಾರಣೆ ಕಾರ್ಯಕ್ರಮ ನಡೆಯಿತು.

ಡಾ.ಹರ್ಷವರ್ದಿನಿ ಮಾತನಾಡಿ, ‘ನಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಕಂಡುಬಂದರೆ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು. ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ತಮ್ಮ ತಮ್ಮ ಮನೆಗಳಲ್ಲಿ ನಿಂತಿರುವ ನೀರುಗಳನ್ನು ಸ್ವಚ್ಛತೆ ಮಾಡಬೇಕು’ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ನವೀನ್, ರಾಘವೇಂದ್ರ, ಸಿ.ಎಚ್.ಓ ಅನುಷಾ, ಆಶಾಕಾರ್ಯಕರ್ತೆಯರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.