ADVERTISEMENT

ಮಂಡ್ಯ ಕನ್ನಡ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 4:25 IST
Last Updated 30 ಜನವರಿ 2026, 4:25 IST
<div class="paragraphs"><p>ಮಂಡ್ಯ ಕನ್ನಡ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ</p></div>

ಮಂಡ್ಯ ಕನ್ನಡ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

   

ಮಂಡ್ಯ: ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಶುಕ್ರವಾರ ಕನ್ನಡ ಭವನ ನಿರ್ಮಾಣಕ್ಕೆ ನಿರ್ಮಲಾನಂದ ನಾಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕನ್ನಡ ಭವನ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದರು‌.

ಕನ್ನಡದ ಏಕತೆಯ ದ್ಯೋತಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಜನ ಮನದಲ್ಲಿ ಮೂಡಿಸುವ ನಿಟ್ಟಿನಲ್ಲಿ ಸರ್ವೆ ನಂ.2 ರಲ್ಲಿ 0.13 ಗುಂಟೆ ಸರ್ಕಾರಿ ಜಮೀನನ್ನು ಕನ್ನಡ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಜಾಗವನ್ನು ಗುರುತಿಸಲಾಗಿದೆ.

ADVERTISEMENT

ಶಾಸಕರಾದ ಪಿ. ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿಲ್ಲಾಧಿಕಾರಿ ಕುಮಾರ, ಜಿ.ಪಂ ಸಿಇಒ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.