ಮಂಡ್ಯ: ಮನ್‌ಮುಲ್‌ನಲ್ಲಿ ಹಾಲಿಗೆ ನೀರು ಮಿಶ್ರಣ ಮಾಡಿಸರಬರಾಜು ಮಾಡುತ್ತಿದ್ದ ಹಗರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಬುಧವಾರ ಆದೇಶ ಹೊರಡಿಸಿದೆ.
ಮನ್‌ಮುಲ್‌ನಲ್ಲಿ ನಡೆದಿದ್ದ ಹಗರಣ ಸಾಕಷ್ಟು ಸದ್ದು ಮಾಡಿತ್ತು. ಈ ಸಂಬಂಧಪ್ರಕರಣ ದಾಖಲಾಗಿ, ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು.ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಘೋಷಣೆ ಮಾಡಿದ್ದರು. ಈ ಮಧ್ಯೆ, ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯ ವಿವಿಧಸಂಘಟನೆಗಳಿಂದಕೇಳಿ ಬಂದಿತ್ತು. ಪ್ರಕರಣ ಬೆಳಕಿಗೆ ಬಂದು ತಿಂಗಳು ಕಳೆದ ನಂತರ ತನಿಖೆಗೆ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.