ADVERTISEMENT

ಕೆ.ಆರ್‌.ಪೇಟೆಗೆ ಎಚ್‌ಡಿಕೆ ಭೇಟಿ ಇಂದು: ನಿಖಿಲ್‌ ಅಭ್ಯರ್ಥಿ?

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 13:58 IST
Last Updated 1 ಡಿಸೆಂಬರ್ 2019, 13:58 IST
ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ   

ಮಂಡ್ಯ: ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದೆ ನಡೆಯಲಿರುವ ಉಪ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ಕೆ.ನಿಖಿಲ್‌ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಶನಿವಾರ ಕೆ.ಆರ್‌.ಪೇಟೆಗೆ ಭೇಟಿ ನೀಡುವ ಕುಮಾರಸ್ವಾಮಿ ಅವರುಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಉಪ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸಲು ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಸಲಹೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆ.ನಿಖಿಲ್‌, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.