ADVERTISEMENT

ಕೆ.ಆರ್.ಪೇಟೆ: ಪಂಪಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 5:09 IST
Last Updated 26 ಡಿಸೆಂಬರ್ 2025, 5:09 IST
ಕೆ.ಆರ್.ಪೇಟೆ ತಾಲ್ಲೂಕಿನ  ಮಡುವಿನಕೋಡಿ ಗ್ರಾಮದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರವನ್ನು ಶಾಸಕ ಎಚ್.ಟಿ.ಮಂಜು ಉದ್ಘಾಟಿಸಿದರು
ಕೆ.ಆರ್.ಪೇಟೆ ತಾಲ್ಲೂಕಿನ  ಮಡುವಿನಕೋಡಿ ಗ್ರಾಮದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರವನ್ನು ಶಾಸಕ ಎಚ್.ಟಿ.ಮಂಜು ಉದ್ಘಾಟಿಸಿದರು   

ಕೆ.ಆರ್.ಪೇಟೆ: ‘ರಾಜ್ಯ ಸರ್ಕಾರ ಕೃಷಿ ಪಂಪಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿರುವುದನ್ನು ಕೈಬಿಡಬೇಕು. ಅಕ್ರಮ-ಸಕ್ರಮ ಯೋಜನೆಯಡಿ ವಿದ್ಯುತ್ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು ಬಂದ್ ಮಾಡಬಾರದು’ ಎಂದು ಶಾಸಕ ಎಚ್.ಟಿ.ಮಂಜು  ಒತ್ತಾಯಿಸಿದರು.

ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮಡುವಿನಕೋಡಿ ಗ್ರಾಮದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. 

‘ಉಚಿತ ವಿದ್ಯುತ್ ಬಂದ್ ಮಾಡಿದರೆ ರೈತರು ಕೊಳವೆ ಬಾವಿ ಆಶ್ರಿತ ನೀರಾವರಿ ಯೋಜನೆ ಬಂದ್ ಆಗಲಿದೆ. ಅದರಿಂದ ಆಹಾರ ಧಾನ್ಯ ಉತ್ಪಾದನೆ ಕುಂಠಿತಗೊಂಡು ಆಹಾರ ಸಮಸ್ಯೆ ಹೆಚ್ಚಾಗಲಿದೆ. ಆಹಾರ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಲಿದೆ’ ಎಂದರು.

ADVERTISEMENT

‘ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯನ್ನು ಹೋಗಲಾಡಿಸಿದ ಕೀರ್ತಿ ಜೆಡಿಎಸ್ ಪಕ್ಷಕ್ಕೆ ಸಲ್ಲಬೇಕು’ ಎಂದರು.

ಸೆಸ್ಕ್ ಕಾರ್ಯ ನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ಕಿರಿಯ ಎಂಜಿನಿಯರ್ ಫಾಜಿಲ್, ಗ್ರಾ.ಪಂ.ಅಧ್ಯಕ್ಷೆ ಪ್ರೀತಿ ಭೈರನಾಯಕ್, ಉಪಾಧ್ಯಕ್ಷ ನಾಗರಾಜು, ಪಿಡಿಒ ಮಹೇಶ್, ಜೆಡಿಎಸ್ ಪಕ್ಷದ ಮುಖಂಡರು ಗ್ರಾ.ಪಂ.ಸದಸ್ಯರು ಮತ್ತು ಡೇರಿ ನಿರ್ದೇಶಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.