ಕೆ.ಆರ್.ಪೇಟೆ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು 10.30ಕ್ಕೆ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡುವರು ಎಂದು ಮುಖಂಡ ಬಿ.ಎಲ್.ದೇವರಾಜು ತಿಳಿಸಿದ್ದಾರೆ.
ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು. ರಾಜ್ಯದ ಮಾದರಿಯಂತೇ ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸಾತನೂರು ಎಸ್.ಕೃಷ್ಣ, ಮುಖಂಡ ಸ್ನೇಹಿತ ರಮೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.