ADVERTISEMENT

ಕೆ.ಆರ್ ಪೇಟೆ: ಕರಾಟೆ ಸ್ಪರ್ಧೆಯಲ್ಲಿ ಪ್ರಗತಿ ಶಾಲೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 12:37 IST
Last Updated 4 ಫೆಬ್ರುವರಿ 2025, 12:37 IST
ಕೆ.ಆರ್. ಪೇಟೆ ಪಟ್ಟಣದ ಪ್ರಗತಿ ಶಾಲೆಯಲ್ಲಿ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಪ್ರಶಸ್ತಿ ಪಡೆದ  ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು
ಕೆ.ಆರ್. ಪೇಟೆ ಪಟ್ಟಣದ ಪ್ರಗತಿ ಶಾಲೆಯಲ್ಲಿ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಪ್ರಶಸ್ತಿ ಪಡೆದ  ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು   

ಕೆ.ಆರ್ ಪೇಟೆ: ಪಟ್ಟಣದ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಹೈದರಾಬಾದಿನ ಕೋಟ್ಲಾ ವಿಜಯ ಭಾಸ್ಕರ್ ರೆಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ವರ್ಲ್ಡ್ ನಾಕಯಾಮಾ ಶೊಟೋಕಾನ್ ಇಂಡಿಯಾ ಕರಾಟೆ ಸಂಸ್ಥೆ ಆಯೋಜಿಸಿದ್ದ ರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

14 ವರ್ಷದ ಬಾಲಕರ ವಿಭಾಗದಲ್ಲಿ 9 ನೇ ತರಗತಿಯ ಗೋವರ್ಧನ್ ಪ್ರಥಮ, 10 ವರ್ಷದ ಬಾಲಕಿಯರ ವಿಭಾಗದಲ್ಲಿ ನಾಲ್ಕನೇ ತರಗತಿ ಜಿ.ಎ.ಧನ್ಯಾ ಪ್ರಥಮ, 10 ವರ್ಷ ಮೇಲ್ಪಟ್ಟ ಬಾಲಕರ ವಿಭಾಗದಲ್ಲಿ 5ನೇ ತರಗತಿ ಕೆ.ಎಂ.ಅಶ್ವಿನ್ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ತಿಳಿಸಿದರು . ಕರಾಟೆ ಶಿಕ್ಷಕ ಹೇಮಂತ್, ಅಂಜಲಿ ಹೇಮಂತ್, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಕಾಳೇಗೌಡ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT