ADVERTISEMENT

ಕೆ.ಆರ್.ಪೇಟೆ | ಮಳೆ: ಕೆರೆಯಂತಾದ ಬಸ್ ನಿಲ್ದಾಣ

ಪ್ರಯಾಣಿಕರನ್ನು ದೋಣಿ ಮೂಲಕ ಹೊರ ತಂದ ಅಗ್ನಿಶಾಮಕ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 2 ಮೇ 2025, 5:06 IST
Last Updated 2 ಮೇ 2025, 5:06 IST
ಕೆ.ಆರ್.ಪೇಟೆ ಪಟ್ಟಣದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕೆರೆಯಂತಾಗಿದ್ದು, ಪ್ರಯಾಣಿಕರನ್ನು ದೋಣಿ ಮೂಲಕ ಹೊರಗೆ ತರಲಾಯಿತು
ಕೆ.ಆರ್.ಪೇಟೆ ಪಟ್ಟಣದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕೆರೆಯಂತಾಗಿದ್ದು, ಪ್ರಯಾಣಿಕರನ್ನು ದೋಣಿ ಮೂಲಕ ಹೊರಗೆ ತರಲಾಯಿತು   

ಕೆ.ಆರ್.ಪೇಟೆ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿಯಿತು.

ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಗಿನ ಜಾವದವರೆವಿಗೂ ಸುರಿಯಿತು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ನಿಲ್ದಾಣದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅಗ್ನಿಶಾಮಕ ಸಿಬ್ಬಂದಿ ದೋಣಿ ಮೂಲಕ ಹೊರಗೆ ತಂದರು.

ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿದ್ದ 20ಕ್ಕೂ ಹೆಚ್ಚು ಬೈಕ್‌ಗಳು ನೀರಿನಿಂದ ಮುಳುಗಡೆಯಾದವು. ಅಂಗಡಿ, ಹೋಟೆಲ್, ಮಳಿಗೆಗಳಿಗೆ ನೀರು ನುಗ್ಗಿ ವಸ್ತುಗಳು ಹಾಳಾದವು.

ADVERTISEMENT

ಬಸ್ ನಿಲ್ದಾಣ ಇರುವ ಜಾಗದಲ್ಲಿ ಹಿಂದೆ ಚೆನ್ನಪ್ಪನ ಕೆರೆ ಇತ್ತು. ಅದನ್ನು ಮುಚ್ಚಿ ನಿಲ್ದಾಣ ನಿರ್ಮಿಸಿದ ಪರಿಣಾಮ ಮಳೆಗಾಲದಲ್ಲಿ ಈ ಜಾಗ ಕೆರೆಯಂತಾಗುತ್ತಿದೆ.

ಪಟ್ಟಣದ ವಿವಿಧೆಡೆ ಚರಂಡಿ ನೀರು ಮನೆಗಳಿಗೆ ನುಗ್ಗಿದ್ದು, ನೀರನ್ನು ಹೊರಗೆ ಹಾಕಲು ನಿವಾಸಿಗಳು ಪರದಾಡಿದರು.

‘ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ. ಪುರಸಭೆ ಅಧಿಕಾರಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.