ಕೆಆರ್ ಪೇಟೆ:ಜೆಡಿಎಸ್ ಪ್ರಾಬಲ್ಯ ಇರುವ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಕೆ.ಆರ್. ಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ‘ಕಮಲ’ ಅರಳಿದೆ.ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, 9,728 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.
2018ರ ವಿಧಾನಸಭೆ ಚುಣಾವಣೆಯಲ್ಲಿ ಜೆಡಿಎಸ್ ಹುರಿಯಾಳು ಆಗಿದ್ದ ನಾರಾಯಣಗೌಡ, ಈ ಬಾರಿಬಿಜೆಪಿಯಿಂದ ಸ್ಪರ್ಧಿಸಿದ್ದರು. ತ್ರಿಕೋನ ಸ್ಪರ್ಧೆಯ ನಿರೀಕ್ಷೆ ಹುಟ್ಟಿಸಿದ್ದ ಈ ಕ್ಷೇತ್ರದ ಮತ ಎಣಿಕ ಆರಂಭದಿಂದಲೂ ನಾರಾಯಣಗೌಡ ಹಾಗೂ ಜೆಡಿಎಸ್ ಅಭ್ಯರ್ಥಿಬಿ.ಎಲ್.ದೇವರಾಜು ನಡುವೆ ಜಿದ್ದಾಜಿದ್ದಿ ಕಂಡು ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.