ADVERTISEMENT

ಮಂಡ್ಯ | KRS ಜಲಾಶಯದಿಂದ ನೀರು ಬಿಡುಗಡೆ: ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 15:43 IST
Last Updated 23 ಜೂನ್ 2025, 15:43 IST
<div class="paragraphs"><p>ಕೃಷ್ಣರಾಜ ಸಾಗರ ಜಲಾಶಯದಿಂದ&nbsp;ನೀರು ಬಿಡುಗಡೆ ಮಾಡಲಾಗಿದೆ</p></div>

ಕೃಷ್ಣರಾಜ ಸಾಗರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ

   

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಜಲಾಶಯದಿಂದ ಸೋಮವಾರ ಸಂಜೆ 6 ಗಂಟೆಯಿಂದ 5 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಯಿತು.

ಕೃಷ್ಣರಾಜ ಸಾಗರ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಯಂತೆ ಉತ್ತಮ ಮಳೆಯಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್‌ ಕೆ.ರಘುರಾಮ್‌ ತಿಳಿಸಿದ್ದಾರೆ.

ADVERTISEMENT

ಜಲಾಶಯದ ಗರಿಷ್ಠ ನೀರಿನ ಮಟ್ಟವು 124.80 ಅಡಿ ಇದ್ದು, ಅಣೆಕಟ್ಟೆ ಭರ್ತಿಗೆ 4.60 ಅಡಿ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲ ಗ್ರಾಮಸ್ಥರು, ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳಲು ವಿನಂತಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.