ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದಲ್ಲಿ ಸೆ.26ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ರಾತ್ರಿ ಸ್ಥಳ ಪರಿಶೀಲನೆ ನಡೆಸಿದರು.
ಬೃಂದಾವನದ ದೋಣಿ ವಿಹಾರ ಕೇಂದ್ರದ ಬಳಿ ಕಾವೇರಿ ಆರತಿ ನಡೆಸಲು ಉದ್ದೇಶಿಸಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು. ಕಾವೇರಿ ಆರತಿಯ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆಗಳನ್ನು ವೀಕ್ಷಿಸಿದರು. ಯಾವುದೇ ಲೋಪವಾಗದಂತೆ ಕಾವೇರಿ ಆರತಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾವೇರಿ ಆರತಿ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಬೆಂಗಳೂರು ನಗರ ನೀರು ಸರಬರಾಜು ಯೋಜನೆ ಹಾಗೂ ಒಳ ಚಂಡಿ ಮಂಡಳಿ ಆಯುಕ್ತ ರಾಮಪ್ರಸಾದ್ ಮನೋಹರ್ ಕಾವೇರಿ ಆರತಿ ನಡೆಯುವ ಕ್ರಮದ ಬಗ್ಗೆ ವಿವರಿಸಿದರು. ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾವೇರಿ ಆರತಿಯ ಪೂರ್ವ ತಾಲೀಮು ಕೂಡ ನಡೆಯಿತು.
ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಪಿ. ರವಿಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್. ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.