
ಮದ್ದೂರು: ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮನೀಡಿದರು.
ಉತ್ತರಪ್ರದೇಶದ ಅಲಹಾಬಾದ್ ಜಿಲ್ಲೆಯ ರಾಜಕುಮಾರ್ ಹಾಗೂ ಪತ್ನಿ ರಶ್ಮಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಗೆಜ್ಜಲಗೆರೆ ಬಳಿ ರಶ್ಮಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಗ ಬಸ್‌ನಲ್ಲಿದ್ದ ಮಹಿಳಾ ಪ್ರಯಾಣಿಕರು ನೆರವು ನೀಡಿ ಹೆರಿಗೆ ಮಾಡಿಸಿದರು.
ಒಂದು ತಿಂಗಳ ಹಿಂದೆ ದಂಪತಿ ಮೈಸೂರಿನ ಗ್ರಾಮವೊಂದಕ್ಕೆ ಕೆಲಸಕ್ಕೆ ತೆರಳಿದ್ದರು. ಊರಿಗೆ ವಾಪಸ್ ಹೋಗುವಾಗ ಮಾರ್ಗ ಮಧ್ಯೆ ಹೆರಿಗೆ ಆಗಿದೆ.
ಬಳಿಕ ಆಂಬುಲೆನ್ಸ್‌ನಲ್ಲಿ ರಶ್ಮಿ ಅವರನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತುರ್ತು ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಬಳಿಕ ಮಂಡ್ಯದ ಮಿಮ್ಸ್ ಗೆ ಕಳುಹಿಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.