ADVERTISEMENT

ಮೈಸೂರು–ಬೆಂಗಳೂರಿಗೆ ಮಹಿಳಾ ವಿಶೇಷ ರೈಲು ಬೇಕು: ರೈಲ್ವೆ ಇಲಾಖೆಗೆ ಸುಮಲತಾ ಮನವಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 4:19 IST
Last Updated 28 ಜೂನ್ 2019, 4:19 IST
   

ನವದೆಹಲಿ:ಬಜೆಟ್‌ಗೆ ಪೂರ್ವಭಾವಿಯಾಗಿ ಕೇಂದ್ರ ರೈಲ್ವೆಸಚಿವ ಪೀಯೂಶ್ ಗೋಯಲ್ ಅವರನ್ನು ಈಚೆಗೆ ಭೇಟಿ ಮಾಡಿದ ಮಂಡ್ಯ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಷ್ ತಮ್ಮ ಕ್ಷೇತ್ರದ ಅಗತ್ಯಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.

ಮೈಸೂರು–ಮಂಡ್ಯ–ರಾಮನಗರ–ಬೆಂಗಳೂರು ಮಾರ್ಗದಲ್ಲಿ ಪ್ರತಿದಿನ ಸಂಚರಿಸುವ ಸಾವಿರಾರು ಮಹಿಳಾ ಕಾರ್ಮಿಕರ ಅನುಕೂಲಕ್ಕಾಗಿ ಮಹಿಳಾ ವಿಶೇಷ ರೈಲು ಓಡಿಸಬೇಕು ಎಂದು ಕೋರಿದರು.ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ದಳದ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.

ADVERTISEMENT

‘ಕೆಲಸಕ್ಕಾಗಿ ಊರಿಂದ ಊರಿಗೆ ಓಡಾಡುವ ಮಹಿಳೆಯರಿಗೆ ರೈಲ್ವೆ ಇಲಾಖೆ ಅಗತ್ಯ ಭದ್ರತೆ ಒದಗಿಸಬೇಕು.ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಿಗ್ಗೆ ಮತ್ತು ಸಂಜೆ ಮುಂಬೈ ಮಾದರಿಯಲ್ಲಿ ವಿಶೇಷ ಮಹಿಳಾ ರೈಲುಗಳನ್ನು ಓಡಿಸಬೇಕು’ ಎಂದು ಮನವಿ ಮಾಡಿದರು.

‘ಕೆ.ಆರ್.ನಗರದಲ್ಲಿ ರೈಲ್ವೆ ಪೊಲೀಸ್ ತರಬೇತಿ ಕೇಂದ್ರ ಸ್ಥಾಪಿಸಿದರೆಸ್ಥಳೀಯರಿಗೆ ಹೆಚ್ಚು ಉದ್ಯೋಗ ಅವಕಾಶ ದೊರೆಯುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.