ಸಾಂದರ್ಭಿಕ ಚಿತ್ರ
ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿಯಲ್ಲಿ ಭಾನುವಾರ ರಾತ್ರಿ ಚಿರತೆಯ ದಾಳಿಗೆ ಎಮ್ಮೆ ಬಲಿಯಾಗಿದೆ.
ಗ್ರಾಮದ ಗೌರಮ್ಮ ರಮೇಶ್ ಅವರಿಗೆ ಸೇರಿದ ಸುಮಾರು ₹ 50 ಸಾವಿರ ಬೆಲೆ ಬಾಳುವ ಹಾಲು ಕರೆಯುವ ಎಮ್ಮೆ ಇದಾಗಿದೆ.
ಗ್ರಾಮದ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಐದು ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಟ್ಟು ಚಿರತೆ ಹಿಡಿದು, ಆತಂಕವನ್ನು ದೂರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.