ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿಯ ಜಮೀನಿನ ಬಳಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆಯೊಂದು ದಾಳಿ ನಡೆಸಿ ಕೊಂದು ಹಾಕಿದೆ.
ಗ್ರಾಮದ ಕೃಷ್ಣೇಗೌಡ ಎಂಬುವರಿಗೆ ಸೇರಿದ ಸುಮಾರು ₹ 50 ಸಾವಿರ ಬೆಲೆ ಬಾಳುವ ಹಸುವನ್ನು ಚಿರತೆ ಕೊಂದು ಭಾಗಶಃ ತಿಂದು ಹೋಗಿದೆ.
ಸಾಕು ಪ್ರಾಣಿಗಳಾದ ಹಸು, ಎಮ್ಮೆ, ಮೇಕೆ, ಕುರಿ, ನಾಯಿಗಳನ್ನು ತಿಂದು ಹಾಕುತ್ತಿರುವ ಪ್ರಕರಣಗಳು ನಿತ್ಯ ಒಂದಲ್ಲ ಒಂದು ಕಡೆ ನಡೆಯುತ್ತಿದೆ. ಸಾಲ ಮಾಡಿ ದನ ಖರೀದಿಸಿರುವ ರೈತ ಕಂಗಲಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿರುವ ಗ್ರಾಮಸ್ಥರು ಅರಣ್ಯ ಇಲಾಖೆಯವರು ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಮನವಿ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ತಾಲ್ಲೂಕು ಅರಣ್ಯಾಧಿಕಾರಿ ಅನಿತಾ, ಪಶು ವೈದ್ಯಾಧಿಕಾರಿ ಡಾ.ದೇವರಾಜ್, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಎ.ಡಿ.ಕುಮಾರ್ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.