ಮದ್ದೂರು: ತಾಲ್ಲೂಕಿನ ತೂಬಿನಕೆರೆ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ರಾಮು ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.
ರಾಮು ಜಮೀನಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಇದರಿಂದಾಗಿ ರಾಮು ಅವರ ಕುತ್ತಿಗೆ ಹಾಗೂ ಭುಜಕ್ಕೆ ಗಾಯಗಳಾಗಿವೆ. ರಾಮು ಚಿರತೆಯೊಂದಿಗೆ ಕಾದಾಡಿ ಪ್ರತಿರೋಧ ತೋರಿದ್ದರಿಂದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ವಲಯ ಅರಣ್ಯಧಿಕಾರಿ ಗವಿಯಪ್ಪ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಬಳಿ ಚಿರತೆಯನ್ನು ಸೆರೆ ಹಿಡಿಯಲು ಬೋಲಹ ಇಡುವುದಾಗಿ ತಿಳಿಸಿದ್ದಾರೆ.
ಗ್ರಾಯಗೊಂಡ ರೈತನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.