ADVERTISEMENT

ಹೆಚ್ಚುತ್ತಿರುವ ಚಿರತೆ ಹಾವಳಿ

ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:25 IST
Last Updated 2 ಅಕ್ಟೋಬರ್ 2020, 16:25 IST
ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಭಾಗದಲ್ಲಿ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಚಿರತೆ ಸೆರೆಗೆ ಬೋನ್ ಇಡಲಾಗಿದೆ
ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಭಾಗದಲ್ಲಿ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಚಿರತೆ ಸೆರೆಗೆ ಬೋನ್ ಇಡಲಾಗಿದೆ   

ಬೆಳಕವಾಡಿ: ಜಮೀನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಮಧ್ಯರಾತ್ರಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬಿಜಿಪುರ ಹೋಬಳಿಯ ಉತ್ತೂರು ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಹೊರ ಭಾಗದ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೆನೆಯನ್ನು ಕಾಯಲು ಗುರುವಾರ ರಾತ್ರಿ ತಂದೆ ವೆಂಕಟಯ್ಯ ಜತೆ ಚರಣ್ ಮಲಗಿದ್ದರು. ಮಧ್ಯರಾತ್ರಿ ಚಿರತೆಯೊಂದು ಚರಣ್ ಮೇಲೆ ದಾಳಿ ಮಾಡಿದೆ. ಕೂಡಲೇ ವೆಂಕಟಯ್ಯ ಮತ್ತು ಚರಣ್ ಪ್ರತಿರೋಧ ತೋರಿದಾಗ ಚಿರತೆ ಪರಾರಿಯಾಗಿದೆ. ಚರಣ್ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಏನು ಅಪಾಯವಿಲ್ಲ ಎಂದು ವೈದ್ಯಾಧಿಕಾರಿ ಡಾ.ವರ್ಣಿತ ತಿಳಿಸಿದ್ದಾರೆ.

ತಾಲ್ಲೂಕಿನ ಬಿಜಿಪುರ ಹೋಬಳಿಯ ಕಗ್ಗಲೀಪುರ ಹಾಗೂ ಬಣವೆ ಗ್ರಾಮಗಳ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ADVERTISEMENT

ಚಿರತೆ ಸೆರೆಹಿಡಿಯಲು ಬೋನ್ ಇಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಆಸೀಫ್ ಅಹ್ಮದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.