ADVERTISEMENT

ಹರಳಹಳ್ಳಿ: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 4:43 IST
Last Updated 9 ಸೆಪ್ಟೆಂಬರ್ 2025, 4:43 IST
ಕೆ.ಆರ್.ಪೇಟೆ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸೆರೆ ಹಿಡಿದಿರುವದು
ಕೆ.ಆರ್.ಪೇಟೆ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸೆರೆ ಹಿಡಿದಿರುವದು   

ಕೆ.ಆರ್.ಪೇಟೆ: ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನ್ನು  ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಗ್ರಾಮದಲ್ಲಿ ಕೆಲವು ತಿಂಗಳಿನಿಂದ ಚಿರತೆಗಳು ಜಾನುವಾರು‌ಗಳ ಮೇಲೆ ದಾಳಿ ನಡೆಸಿದ್ದವು. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು.

‘ಬೋನಿಗೆ ನಾಲ್ಕು ವರ್ಷದ ಹೆಣ್ಣು ಚಿರತೆ ಬಿದ್ದಿದೆ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಗ್ರಾಮದ ಅಂಚಿನಲ್ಲಿ ಇನ್ನೂ ಕೆಲ ಚಿರತೆಗಳು ಓಡಾಡುತ್ತಿದ್ದು, ಅವನ್ನೂ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.