
ಮದ್ದೂರು: ಹಲವು ದಿನಗಳಿಂದಲೂ ಗ್ರಾಮದ ಜನರ ನಿದ್ರೆ ಕೆಡಿಸಿದ್ದ ತಾಲ್ಲೂಕಿನ ದೇಶಹಳ್ಳಿಯ ಬಾಳೆ ತೋಟದಲ್ಲಿ ಶುಕ್ರವಾರ ಅರಣ್ಯ ಇಲಾಖೆಯ ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
2 ವರ್ಷದ ಹೆಣ್ಣು ಚಿರತೆ ಸೆರೆಯಾಗಿದ್ದು, ಬೋನಿನಲ್ಲಿಟ್ಟಿದ್ದ ನಾಯಿ ತಿನ್ನಲು ಬಂದು ಸಿಕ್ಕಿ ಬಿದ್ದಿದೆ.
ಈ ಭಾಗದಲ್ಲಿ ಮೂರು ಚಿರತೆಗಳು ಕಂಡು ಬಂದಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳು ದೂರು ನೀಡಿದ್ದ ಹಿನ್ನಲೆಯಲ್ಲಿ 15 ದಿನಗಳ ಹಿಂದೆಯೇ ಬೋನು ಇಡಲಾಗಿತ್ತು.
‘ಇನ್ನೂ ಎರಡು ಚಿರತೆಗಳಿದ್ದು, ಅವುಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಲ್ಲೂಕು ವಲಯ ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತು ಅರಣ್ಯಾಧಿಕಾರಿ ಚಿನ್ನಪ್ಪ ಭೇಟಿ ನೀಡಿದ್ದರು.
ಮೇಲಾಧಿಕಾರಿಗಳ ಗಮನಕ್ಕೆ ತಂದು ಚಿರತೆಯನ್ನು ಮೀಸಲು ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.