ADVERTISEMENT

ಕೆ.ಆರ್.ಪೇಟೆ: ರಾಜ್ಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 4:37 IST
Last Updated 27 ಜುಲೈ 2025, 4:37 IST
<div class="paragraphs"><p>ರಾಮನಗರ ತಾಲ್ಲೂಕಿನ ಬೊಮ್ಮಚ್ಚನಹಳ್ಳಿಯಲ್ಲಿ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿರುವ ಚಿರತೆ</p></div>

ರಾಮನಗರ ತಾಲ್ಲೂಕಿನ ಬೊಮ್ಮಚ್ಚನಹಳ್ಳಿಯಲ್ಲಿ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿರುವ ಚಿರತೆ

   

ಕೆ.ಆರ್.ಪೇಟೆ: ತಾಲ್ಲೂಕಿನ ಮೈಸುರು – ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಬರುವ ಮುರುಕನಹಳ್ಳಿ ತೋಟಗಾರಿಕಾ ಫಾರ್ಮ್ ಬಳಿ ಚಿರತೆಯೊಂದು ಕಾಣಿಸಿಕೊಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ.

ಶನಿವಾರ ನಸುಕಿನಲ್ಲಿ ಚಿರತೆ ತೋಟಗಾರಿಕಾ ಫರ್ಮ್ ನ ಕಾಂಪಂಢ್ ಗೋಡೆಯಲ್ಲಿ ಕುಳಿತಿರುವ ಚಿತ್ರವನ್ನು ವಾಹನ ಸವಾರರು ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಒಳಗಾಗಿದೆ. ಚಿರತೆ ಹಿಡಿದು ಹೆದ್ದಾರಿ ಯವಾಹನ ಸವಾರರ ಭಯ ನಿವಾರಿಸಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.