
ಲೋಕಸಭಾ ಚುನಾವಣೆ ಹೊತ್ತಲ್ಲೇ, ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಬಿಜೆಪಿ ಜೆಡಿಎಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ದೆಹಲಿಗೆ ಹೋಗಿ ಬಂದ ಮೇಲೆ ಹೊಸ ಲೆಕ್ಕಾಚಾರಗಳು ಶುರುವಾಗಿದೆ. ಮಂಡ್ಯ ಟಿಕೆಟ್ ಫೈಟ್ ಜೋರಾಗಿರುವಾಗಲೇ ಹಾಲಿ ಸಂಸದೆ ಸುಮಲತಾ ಅಂಬರೀಶ್ ಖಂಡಿತವಾಗಿಯೂ ಬಿಜೆಪಿಯಿಂದಲೇ ನಾನು ಸ್ಪರ್ಧಿಸುವ ವಿಶ್ವಾಸ ನನಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.