ಮಂಜಮ್ಮ
ಮದ್ದೂರು: ತಾಲ್ಲೂಕಿನ ಕೊಪ್ಪ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜಮ್ಮ ಶನಿವಾರ ಪಂಚಾಯಿತಿ ಕಚೇರಿಯಲ್ಲಿ ₹ 1.2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.
‘ನಿವೇಶನಕ್ಕೆ ಖಾತೆ ಮಾಡಿಕೊಡಲು ಲಂಚ ಕೊಡಬೇಕೆಂದು ಕೊತ್ತನಹಳ್ಳಿಯ ಕೃಷ್ಣೆಗೌಡ ಅವರಿಗೆ ಮಧ್ಯವರ್ತಿ ಅಭಿಷೇಕ್ ಮೂಲಕ ಅಧಿಕಾರಿ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.