ADVERTISEMENT

ಮಳವಳ್ಳಿ | ಲಂಚಕ್ಕೆ ಬೇಡಿಕೆ: ಗ್ರಾ.ಪಂ. ಅಧ್ಯಕ್ಷೆಯ ಪತಿ, ಉಪಾಧ್ಯಕ್ಷ ಬಂಧನ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2025, 12:38 IST
Last Updated 6 ಫೆಬ್ರುವರಿ 2025, 12:38 IST
<div class="paragraphs"><p>ಶೇಖರ್‌ ಮತ್ತು&nbsp;ಮನೋಹರ ಅರಸ್‌</p></div>

ಶೇಖರ್‌ ಮತ್ತು ಮನೋಹರ ಅರಸ್‌

   

ಮಳವಳ್ಳಿ (ಮಂಡ್ಯ): ಜಮೀನು ವಿವಾದ ಬಗೆಹರಿಸಲು ₹1 ಲಕ್ಷ ಲಂಚ ಪಡೆಯುತ್ತಿದ್ದ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಶೇಖರ್ ಹಾಗೂ ಹಾಲಿ ಉಪಾಧ್ಯಕ್ಷ ಮನೋಹರ ಅರಸ್‌ ಅವರನ್ನು ಗುರುವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ಗುರುಪ್ರಸಾದ್ ಎಂಬುವವರ ಜಮೀನು ಸರ್ಕಾರಿ ಶಾಲೆಗೆ ಹೊಂದಿಕೊಂಡಂತೆ ಇತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ತಕರಾರು ಎತ್ತಿತ್ತು. ನಂತರ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹದ್ದುಬಸ್ತು ನಿಗದಿಪಡಿಸಿದ್ದರು.

ADVERTISEMENT

ಈ ಜಮೀನಿನ ವಿವಾದವನ್ನು ಬಗೆಹರಿಸಲು ಮಧ್ಯಪ್ರವೇಶಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಅವರ ಪತಿ ಶೇಖರ್ ಹಾಗೂ ಉಪಾಧ್ಯಕ್ಷ ಮನೋಹರ ಅರಸ್‌ ₹12 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹8 ಲಕ್ಷ ನೀಡಲು ಗುರುಪ್ರಸಾದ್ ಒಪ್ಪಿದ್ದರು.

ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಬ್ಯಾಟರಾಯಗೌಡ ಮತ್ತು ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.