
ಭಾರತಿನಗರ (ಮಂಡ್ಯ ಜಿಲ್ಲೆ): ಮಂಡ್ಯ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ತೊರೆಚಾಕನಹಳ್ಳಿ ಪುಟ್ಟಸ್ವಾಮಿ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ಏಕಕಾಲಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ್ದಾರೆ.
ಸಿ.ಪುಟ್ಟಸ್ವಾಮಿ ಅವರಿಗೆ ಸೇರಿದ ಮಂಡ್ಯದಲ್ಲಿನ ಮನೆ, ತೊರೆಚಾಕನಹಳ್ಳಿಯಲ್ಲಿನ ಮನೆ, ಸಂಬಂಧಿಕರ ಎರಡು ಮನೆಗಳು ಹಾಗೂ ಫಾರ್ಮ್ ಹೌಸ್, ಸೇರಿದಂತೆ ಐದು ಕಡೆ ಪ್ರತ್ಯೇಕ ತಂಡಗಳಾಗಿ ದಾಳಿ ನಡೆಸಲಾಗಿದೆ.
ಎಲ್ಲೆಡೆಯೂ ದಾಖಲೆಗಳ, ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.
ರಾಜ್ಯಾದ್ಯಂತ ಹಲವು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿಗಾಗಿ ನಿಯೋಜಿಸಲಾಗಿದ್ದ ಲೋಕಾಯುಕ್ತರ ಒಂದು ತಂಡ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಈ ಹಿಂದೆ ಈತ ಚನ್ನಪಟ್ಟಣ, ಮದ್ದೂರು ಸೇರಿ ಹಲವು ಕಡೆ ಪುರಸಭೆ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇಲ್ಲಿಯೂ ಕೂಡ ಇವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತೆಂದು ಮೂಲಗಳು ತಿಳಿಸಿವೆ.
ಲೋಕಾಯುಕ್ತ ಪೊಲೀಸ್ ಇನ್ ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.