
ಮಂಡ್ಯ: ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ವ್ಯವಸ್ಥಾಪಕ ವಿ.ಎಸ್.ಭೈರೇಶ್ ಮನೆ, ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಲ್ಲಿನ ಮಹಾರಾಜ ನಗರದ ಸಿರಿಭೈರವ ನಿವಾಸ, ಹುಟ್ಟೂರಾದ ವಳಗೆರೆಹಳ್ಳಿ ಮನೆ ಹಾಗೂ ಕಚೇರಿಯಲ್ಲಿ ಏಕಕಾಲದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಎಸ್ಪಿ ಸುರೇಶ್‌ಬಾಬು, ಡಿವೈಎಸ್‌ಪಿ ಸುನಿಲ್‌ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ವಿ.ಎಸ್.ಭೈರೇಶ್ ಆಸ್ತಿ, ಹಣದ ವಿವರ ಬಗ್ಗೆ ಮಾಹಿತಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ತಲಾಷ್ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಸೇರಿದಂತೆ ಹಲವು ಆರೋಪ ಹೊತ್ತಿರುವ ಭೈರೇಶ್ ಮೇಲೆ, ಇತ್ತೀಚೆಗೆ ಮಂಡ್ಯಕ್ಕೆ ಆಗಮಿಸಿದ್ದ ಉಪ ಲೋಕಾಯುಕ್ತರ ಎದುರು ಆರೋಪಗಳ ಸುರಿಮಳೆಯೇ ಬಂದಿದ್ದವು.
ಸಂಜೆಯಾದರೂ ಪರಿಶೀಲನೆಯಲ್ಲಿ ತೊಡಗಿದ್ದ ಅಧಿಕಾರಿಗಳ ತಂಡವು ಮತ್ತಷ್ಟು ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.