ಸಾವು (ಪ್ರಾತಿನಿಧಿಕ ಚಿತ್ರ)
ಮಳವಳ್ಳಿ: ಪಟ್ಟಣದ ಹೊರವಲಯದ ಮಾರೇಹಳ್ಳಿಯ ಬಳಿ ಕೊಳ್ಳೇಗಾಲ-ಮಳವಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾಡಹಳ್ಳಿ ಗ್ರಾಮದ ಮದಲೈ ಮುತ್ತು ಮನುವೆಲ್(44) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತುಮಕೂರಿನಲ್ಲಿ ಕಲ್ಲು ಹೊಡೆಯುವ ಕೆಲಸ ಮಾಡುತ್ತಿದ್ದ ಮದಲೈ ಮುತ್ತು ಮನುವೆಲ್ ಸ್ವಗ್ರಾಮಕ್ಕೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮಾರೇಹಳ್ಳಿ ಬಳಿ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.