
ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಮನೆಗೆ ಬೆಂಕಿಹೊತ್ತಿಕೊಂಡಿದ್ದು, ಕಲ್ನಾರ್ ಸೀಟಿನ ಮನೆಯೊಂದು ಸುಟ್ಟು ಹೋಗಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಬಲಮುರಿ ರಸ್ತೆಯಲ್ಲಿರುವ ರವಿ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವುದು ಖಾತರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.
ಬೆಂಕಿಯ ಕೆನ್ನಾಲಿಗೆಗೆ ಮನೆಯ ಚಾವಣಿ ಸಂಪೂರ್ಣ ಹಾನಿಗೀಡಾಗಿದೆ. ಬಟ್ಟೆ, ಟಿವಿ, ಧವಸ– ಧಾನ್ಯ, ಪಾತ್ರೆಗಳು ನಾಶವಾಗಿವೆ. ಶ್ರೀರಂಗಪಟ್ಟಣ ಮತ್ತು ಮೈಸೂರಿನ ಹೆಬ್ಬಾಳದಿಂದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ನಷ್ಟದ ಅಂದಾಜು ಸಿಕ್ಕಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಕೆಆರ್‌ಎಸ್ ಠಾಣೆ ಪಿಎಸ್‌ಐ ರಮೇಶ್ ಕರಕಿಕಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.