ಮಳವಳ್ಳಿ: ತಾಲ್ಲೂಕಿನ ಕಿರುಗಾವಲು ಹೋಬಳಿಯ ಮಾದಹಳ್ಳಿ ಗ್ರಾಮದ ಹೊರವಲಯದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಮೇಕೆಗಳ ಹಿಂಡಿನ ಮೇಲೆ ಚಿರತೆ ದಾಳಿ ಮಾಡಿ ಎರಡು ಮೇಕೆಗಳನ್ನು ಕೊಂದು ಹಾಕಿದೆ.
ಗ್ರಾಮದ ಟಿ.ಸಿ. ಸುಂದರ್ ಅವರು ಹೊರವಲಯದ ತಮ್ಮ ಮನೆಯ ಬಳಿ ಫಾರಂ ನಿರ್ಮಿಸಿ ಮೇಕೆಗಳನ್ನು ಸಾಕುತ್ತಿದ್ದರು. ಮಂಗಳವಾರ ಬೆಳಿಗ್ಗೆ ಮೇಕೆಗಳ ಹಿಂಡಿನ ಮೇಲೆ ದಾಳಿ ಮಾಡಿದ ಚಿರತೆ ₹20 ಸಾವಿರ ಬೆಲೆ ಬಾಳುವ ಎರಡು ಮೇಕೆಗಳನ್ನು ಕೊಂದು ಹಾಕಿವೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತ ಟಿ.ಸಿ. ಸುಂದರ್ ಮಾತನಾಡಿ, ‘ಹಲವು ತಿಂಗಳಿಂದ ನಿರಂತರವಾಗಿ ಚಿರತೆ ದಾಳಿ ಮಾಡಿ ಐದಾರು ಮೇಕೆಗಳನ್ನು ತಿಂದು ಹಾಕಿವೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಕೂಡಲೇ ಚಿರತೆಗಳ ಹಾವಳಿಗೆ ಕಡಿವಾಣ ಹಾಕಬೇಕು. ನಮಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.