ADVERTISEMENT

ಮದ್ದೂರು | ಹೊತ್ತಿ ಉರಿದ ಕಾರು: ಇಬ್ಬರು ಪ್ರಾಣಾಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 5:42 IST
Last Updated 12 ಜನವರಿ 2026, 5:42 IST
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಗುರುವಾರ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಕಾರು 
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಗುರುವಾರ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಕಾರು    

ಮದ್ದೂರು: ನಿಡಘಟ್ಟ ಸಮೀಪದ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತಾ ಎಂಬುವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಕಾರಿನಲ್ಲಿ ಹಿಂತಿರುಗುವ ವೇಳೆ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕಾರಿನಿಂದ ಕೆಳಗಿಳಿಸಿದ್ದರಿಂದ ಅನಾಹುತ ಸಂಭವಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.