ADVERTISEMENT

ಮದ್ದೂರು | ಕಂಟೇನರ್ ಲಾರಿಗೆ ಕಾರು ಡಿಕ್ಕಿ; ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 5:41 IST
Last Updated 27 ಡಿಸೆಂಬರ್ 2025, 5:41 IST
<div class="paragraphs"><p>ಅಪಘಾತ,&nbsp;–ಪ್ರಾತಿನಿಧಿಕ ಚಿತ್ರ</p></div>

ಅಪಘಾತ, –ಪ್ರಾತಿನಿಧಿಕ ಚಿತ್ರ

   

–ಪ್ರಾತಿನಿಧಿಕ ಚಿತ್ರ

ಮದ್ದೂರು: ನಿಂತಿದ್ದ ಕoಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಗೆಜ್ಜಲಗೆರೆ ಬಳಿ ಮೈಸೂರು–ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಗುರುವಾರ ರಾತ್ರಿ 10.30 ಕ್ಕೆ ಸಂಭವಿಸಿದೆ.

ADVERTISEMENT

ಕಾರಿನಲ್ಲಿದ್ದ ಮಂಡ್ಯ ಬಳಿಯ ಯತ್ತಗನಹಳ್ಳಿಯ ನಿವಾಸಿ ಅಶೋಕ್ (35) ಸ್ಥಳದಲ್ಲೇ ಮೃತಪಟ್ಟರೆ, ಕಾರು ಚಾಲಕ ಮಂಡ್ಯದ ಗೋವಿಂದರಾಜು (33) ಮಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ. ದಿನೇಶ್ ಎಂಬುವರು ಗಾಯಗೊಂಡಿದ್ದು ಚಿಕಿತ್ಸೆಗೆ ಮಿಮ್ಸ್ ಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಗುರುವಾರ ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹೋಟೆಲ್‌ವೊಂದಕ್ಕೆ ಊಟ ಮಾಡಲು ಹೋಗುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಯಶವಂತ್ ಕುಮಾರ್, ಸಿಪಿಐ ನವೀನ್ ಕುಮಾರ್, ಸಂಚಾರ ವಿಭಾಗದ ಪಿಎಸ್‌ಐ ರಂಗಸ್ವಾಮಿ ಭೇಟಿ ನೀಡಿದ್ದರು. ಮದ್ದೂರಿನ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.