
ಮದ್ದೂರು: ನಗರದ ಸೋಮನಹಳ್ಳಿಯ ಮದ್ದೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ‘ಬೆಳ್ಳಿ ಹಬ್ಬ’ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಇದೇ ಡಿ.20ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ಎ.ಎಂ. ಮಹೇಶ್ ತಿಳಿಸಿದರು.
ಈ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಕರಪತ್ರಗಳು ಹಾಗೂ ಆಹ್ವಾನ ಪತ್ರಿಕೆಗಳನ್ನು ಗುರುವಾರ ಬಿಡುಗಡೆಗೊಳಿಸಿದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ ಮಾತನಾಡಿದರು.
‘ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ, ಗಿಡ ನೆಡುವ ಕಾರ್ಯಕ್ರಮ, ಸ್ಮರಣ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.
ಶಾಸಕ ಕೆ.ಎಂ. ಉದಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತೆ ರಾಗಪ್ರಿಯಾ ಅವರು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ, ಮಂಡ್ಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ ಸೇರಿದಂತೆ ಹಲವು ಮುಖ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕಾರಿ ಮಂಡಳಿಯ ಗೌರವ ಅಧ್ಯಕ್ಷ ಹೊಂಬಯ್ಯ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ಖಜಾಂಚಿ ಪ್ರತಾಪ್ ಸಿಂಹ, ಉಪಾಧ್ಯಕ್ಷ ಸೋಮರಾಜು, ಸಹ ಕಾರ್ಯದರ್ಶಿ ಶಿವರಾಜು, ಪದಾಧಿಕಾರಿಗಳಾದ ಮಧುಕುಮಾರ, ಶೇಖರ್, ಅಮಿತ, ಚಂದ್ರಕಲಾ, ಆಶಾಲತಾ, ಜಯವಾಣಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.